ಬೆಂಗಳೂರು, ಡಿ.26 (Daijiworld News/PY) : ರಾಜ್ಯದ ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಗರಾಭಿವೃದ್ಧಿ ಇಲಾಖೆಯಿಂದ ಮೀಸಲಾತಿ ಪ್ರಕಟಿಸಲಾಗಿದೆ.
ಬಳ್ಳಾರಿ ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಉಪಮೇಯರ್ ಸ್ಥಾನಕ್ಕೆ ಪರಿಶಿಷ್ಟವರ್ಗದ ಮಹಿಳೆಗೆ ಮೀಸಲಾತಿ ನಿಗದಿಪಡಿಸಲಾಗಿದೆ.
ಬೆಳಗಾವಿ ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ.
ಬೆಂಗಳೂರು ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಪಡಿಸಲಾಗಿದೆ.
ದಾವಣಗೆರೆ ಮೇಯರ್ ಸ್ಥಾನಕ್ಕೆ ಸಾಮಾನ್ಯ ವರ್ಗ, ಉಪಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆಗೆ ನಿಗದಿಪಡಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ವರ್ಗವನ್ನು ನಿಗದಿಪಡಿಸಲಾಗಿದೆ.
ಕಲಬುರ್ಗಿ ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಉಪಮೇಯರ್ ಸ್ಥಾನಕ್ಕೆ ಬಿಸಿಎ ಅಭ್ಯರ್ಥಿಯನ್ನು ಮೀಸಲಿಡಲಾಗಿದೆ.
ಮಂಗಳೂರು ಮೇಯರ್ ಸ್ಥಾನಕ್ಕೆ ಸಾಮಾನ್ಯ ವರ್ಗ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಯನ್ನು ಮೀಸಲಿಡಲಾಗಿದೆ.
ಮೈಸೂರು ಮೇಯರ್ ಸ್ಥಾನಕ್ಕೆ ಬಿಸಿಎ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ ಅಭ್ಯರ್ಥಿ.
ಶಿವಮೊಗ್ಗ ಮೇಯರ್ ಸ್ಥಾನಕ್ಕೆ ಬಿಸಿಬಿ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ.
ತುಮಕೂರು ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಬಿಸಿಎ ಮಹಿಳೆ.
ವಿಜಯಪುರ ಮೇಯರ್ ಸ್ಥಾನಕ್ಕೆ ಬಿಸಿಎ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳಾ ಸದಸ್ಯರಿಗೆ ನಿಗದಿಪಡಿಸಲಾಗಿದೆ.