ಅಮ್ರೋಹಾ, ಡಿ 27 (Daijiworld News/MSP): ಮದರಸದ ಮ್ಯಾನೇಜರ್ ಓರ್ವ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ.
ಉತ್ತರಪ್ರದೇಶ ಅಮ್ರೋಹಾ ಜಿಲ್ಲೆಯ ಹಸನ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು 12 ವರ್ಷದ ಬಾಲಕಿ ಮೇಲೆ ಮದರಸಾ ಮ್ಯಾನೇಜರ್ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಅದೇ ಮದ್ರಸಾದ ವಿದ್ಯಾರ್ಥಿನಿಯಾಗಿದ್ದು, " ತನ್ನ ಮೇಲೆ ಮ್ಯಾನೇಜರ್ ನಿಂದ ಅತ್ಯಾಚಾರ ಎಸಗಲಾಗಿದೆ ಎಂದು ಬಾಲಕಿ ದೂರು ನೀಡಿದ್ದಾಳೆ. ನಾವು ಪ್ರಕರಣ ದಾಖಲಿಸಿದ್ದೇವೆ. ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ "ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅಜಯ್ ಪ್ರತಾಪ್ ಸಿಂಗ್ ಹೇಳಿದ್ದಾರೆ.