ಉತ್ತರ ಪ್ರದೇಶ, ಡಿ 27 (Daijiworld News/PY) : ಉತ್ತರ ಪ್ರದೇಶದ ಜೈತಾರ ಎಂಬಲ್ಲಿ ಬಾಲಕಿಯನ್ನು ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗುರುವಾರ ನಡೆದಿದೆ.
ಸಾಮೂಹಿಕ ಅತ್ಯಾಚಾರಗೈದ ಆರೋಪಿಗಳಿಗೆ ಬಲೆ ಬೀಸಲಾಗಿದ್ದು, ಈ ಪೈಕಿ ಓರ್ವನನ್ನು ಬಂಧಿಸಿದ್ದು, ಉಳಿದ ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಆರೋಪಿಗಳ ಪೈಕಿ ಓರ್ವನನ್ನು 15-20 ವರ್ಷ ವಯಸ್ಸಿನವನು ಎಂದು ಅಂದಾಜಿಸಲಾಗಿದೆ.
ಘಟನೆಯ ಬಗ್ಗೆ ವಿವರಿಸಿದ ಬಾಲಕಿಯ ತಂದೆ 'ನಾವು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದೇವೆ, ಮೂರು ಜನ ನನ್ನ ಮಗಳನ್ನು ಹೊಲಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ನಾವು ಸ್ಥಳಕ್ಕೆ ಹೋದಾಗ ನಮ್ಮ ಮೇಲೆ ದಾಳಿ ಮಾಡಲು ಯತ್ನಿಸಿದ್ದಾರೆ' ಎಂದು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಪೊಲೀಸರು ಭಾರತೀಯ ದಂಡ ಸಂಹಿತೆಯಡಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಠಾಣಾಧಿಕಾರಿ ಅಜಯ್ ಭಡೋರಿಯ ತಿಳಿಸಿದ್ದಾರೆ.