ಶ್ರೀನಗರ, ಡಿ 27 (Daijiworld News/MB) : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದುಗೊಂಡ ಸುಮಾರು 5 ತಿಂಗಳುಗಳ ನಂತರ ಲಡಾಖ್'ನ ಕಾರ್ಗಿಲ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನರಾರಂಭ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಗಿಲ್ ನ ಪರಿಸ್ಥಿತಿ ಸಂಪೂರ್ಣವಾಗಿ ಸುಧಾರಣೆಗೊಂಡಿದ್ದು ನಾಲ್ಕು ತಿಂಗಳುಗಳಿಂದ ಯಾವುದೇ ರೀತಿ ಅಹಿತಕರ ಘಟನೆಗಳು ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಗೊಳಿಸುವ ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗೆಯೇ ಈ ಸೌಲಭ್ಯವನ್ನು ಸ್ಥಳೀಯ ಧಾರ್ಮಿಕ ನಾಯಕರು ದುರ್ಬಳಕೆ ಮಾಡಬಾರದೆಂದು ಮನವಿ ಮಾಡಿದ್ದಾರೆ.
ಈಗಾಗಲೇ ಬ್ರಾಂಡ್ ಬ್ಯಾಂಡ್ ಸೇವೆಗಳು ಆರಂಭ ಮಾಡಲಾಗಿದೆ. ಈಗ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ.
ಆಗಸ್ಟ್ 5 ರಂದು ಕೇಂದ್ರ ಸರ್ಕಾರ 370 ವಿಧಿ ರದ್ದು ಮಾಡಿದ ಬಳಿಕ ಕಾರ್ಗಿಲ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿಕತಗೊಳಿಸಲಾಗಿತ್ತು.