ಬೆಂಗಳೂರು, ಡಿ 28 (Daijiworld News/MB) : ಬಿಜೆಪಿ ಹಾಗೂ ಆರ್ಎಸ್ಎಸ್ ರಾಜ್ಯದಲ್ಲಿ ಉಂಟು ಮಾಡಿದ ಗಲಭೆಯ ಕಾರಣಕ್ಕೆ ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕರ ಆಸ್ತಿಯನ್ನು ಜಪ್ತಿ ಮಾಡಲಾಗುವುದೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಟ್ವೀಟರ್ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಅವರು, "ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಗಲಭೆಕೋರರ ಆಸ್ತಿ ಜಪ್ತಿ ಮಾಡಲಾಗುತ್ತದೆ ಎಂದು ಆರ್ ಅಶೋಕ್ ತಿಳಿಸಿದ್ದಾರೆ. ಹಾಗಾದರೆ ರಾಜ್ಯದಲ್ಲಿ ಇಷ್ಟರವರೆಗೂ ಗಲಭೆಗಳಿಗೆ ಕಾರಣವಾಗಿರುವ ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕರ ಮೇಲೆ ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರ ಗಲಭೆಕೋರರ ಆಸ್ತಿಯನ್ನು ಮುಟ್ಟುಗೋಲು ಹಾಕಲು ಚಿಂತನೆ ನಡೆಸಿದೆಯಂತೆ. ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿ ಹಿಂದಿನ ಗಲಭೆಗಳಲ್ಲಿ ಆರೋಪಿಗಳಾಗಿರುವ ಬಿಜೆಪಿ ನಾಯಕರ ಮೇಲೂ ಕ್ರಮಕೈಗೊಳ್ಳಲು ಸರ್ಕಾರ ಸಿದ್ದ ಇದೆಯೇ? ಎಂದು ಕೇಳಿದ್ದಾರೆ.