ಬೆಂಗಳೂರು, ಡಿ 29 (Daijiworld News/MB) : ಅನಾರೋಗ್ಯದಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವದು ದೈವಾಧೀನರಾದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಶ್ರೀಗಳ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರಿನಲ್ಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಶ್ರೀಗಳ ಅಂತಿಮ ಸಾರ್ವಜನಿಕ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಆ ಬಳಿಕ ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಶ್ರೀಗಳ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲಿದ್ದು ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ನಂತರ ಅಲ್ಲಿನ ಶ್ರೀ ನಗರದ ಸಮೀಪ ಇರುವ ವಿದ್ಯಾಪೀಠದಲ್ಲಿ ಶ್ರೀಗಳ ಬೃಂದಾವನ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.