ಬೆಳಗಾವಿ, ಡಿ 29(Daijiworld News/PY) : ನವಜಾತ ಹೆಣ್ಣು ಶಿಶುವೊಂದನ್ನು ಶಾಲೆಯ ಶೌಚಾಲಯದಲ್ಲಿ ಬಿಟ್ಟು ಹೋಗಿರುವ ಅಮಾನುಷ ಘಟನೆ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮ ನಡೆದಿದೆ.
ಶನಿವಾರ ಮಧ್ಯಾಹ್ನದ ವೇಳೆ ಶಾಲೆಗೆಂದು ಬಂದಿರುವ ಶಿಶುವಿನ ಪೋಷಕರು ಮಗುವನ್ನು ಶಾಲಾ ಶೌಚಾಲಯದಲ್ಲಿಯೇ ಬಿಟ್ಟುಹೋಗಿದ್ದಾರೆ. ಮಗು ಅಳುವುದನ್ನು ಕೇಳಿಸಿಕೊಂಡ ಸ್ಥಳೀಯರು ತಕ್ಷಣವೇ ಮಗುವಿದ್ದ ಸ್ಥಳಕ್ಕೆ ಹೋದಾಗ ಮಗು ಪತ್ತೆಯಾಗಿದೆ. ಕೂಡಲೇ ಸ್ಥಳೀಯರು ಸೇರಿ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಣ್ಣು ಶಿಶುವಾದ ಕಾರಣದಿಂದ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಶಿಶುವನ್ನು ಶಾಲಾ ಶೌಚಾಲಯದಲ್ಲಿ ಬಿಟ್ಟು ಹೋದ ತಾಯಿಗೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.
ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಶಿಶುವನ್ನು ಬಿಟ್ಟುಹೋಗಿರುವ ಪೋಷಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.