ಮುಂಬೈ, ಡಿ 30 (Daijiworld News/ MB) : ಕಾಂಗ್ರೆಸ್ ಮುಖಂಡ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಮತ್ತು ಶಿವಸೇನಾ ಶಾಸಕ ಆದಿತ್ಯ ಠಾಕ್ರೆ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸೋಮವಾರ ಮಧ್ಯಾಹ್ನ 1 ಗಂಟೆ ನಡೆಯಲಿರುವ ಮಹಾರಾಷ್ಟ್ರ ಸಚಿವ ಸಂಪುಟ ಸಭೆಯಲ್ಲಿ ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಆಯ್ಕೆಯಾಗಿದ್ದು ಶಿವಸೇನಾ ಹಾಗೂ ಎನ್ಸಿಪಿ ತಲಾ 13 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹಾಗೆಯೇ ಎನ್ಸಿಪಿ ಮುಖಂಡ ನವಾಬ್ ಮಲ್ಲಿಕ್, ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸಂಪುಟ ದರ್ಜೆ ಸಚಿವರಾಗಲಿದ್ದಾರೆ.