ಮುಂಬೈ, ಡಿ 30 (Daijiworld News/ MB) : ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್ಸಿಪಿ) ನಾಯಕ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ಒಂದು ತಿಂಗಳ ಬಳಿಕ ಸಂಪುಟ ವಿಸ್ತರಣೆ ಮಾಡಲಾಗಿದ್ದು ವಿದ್ಯಾಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಬಿಎಸ್ ಕೊಶಿಯಾರಿ ಪ್ರಮಾಣವಚನ ಭೋದನೆ ಮಾಡಿದರು.
ಈ ಸಂದರ್ಭದಲ್ಲಿ ಎನ್ಸಿಪಿಯಿಂದ 13, ಕಾಂಗ್ರೆಸ್ನಿಂದ 10 ಸೇರಿದಂತೆ ಒಟ್ಟು 36 ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ಎನ್ಸಿಪಿ ಮುಖಂಡ ನವಾಬ್ ಮಲ್ಲಿಕ್, ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಹಾಗೂ ಆದಿತ್ಯ ಠಾಕ್ರೆ ಕೂಡಾ ಸಂಪುಟ ಸೇರಿದ್ದಾರೆ.