ಚಿಕ್ಕಬಳ್ಳಾಪುರ, ಡಿ 30 (Daijiworld News/ MB) : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಹೊಸ ವರ್ಷಾಚರಣೆ ಸಲುವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವನ್ನು ಹೇರಿ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಆರ್ ಲತಾ ಅವರು ಚಿಕ್ಕಬಳ್ಳಾಪುರ ತಾಲೂಕು ನಂದಿ ಗ್ರಾಮದ ಬಳಿಯ ನಂದಿಗಿರಿಧಾಮಕ್ಕೆ ಡಿಸೆಂಬರ್ 31ರ ಸಂಜೆ 4 ಗಂಟೆಯಿಂದ, ಹೊಸ ವರ್ಷ 2020ರ ಜನವರಿ 1ರ ಬೆಳಿಗ್ಗೆ 8 ಗಂಟೆಯವರೆಗೂ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಹೊಸ ವರುಷದ ಹಿನ್ನಲೆಯಲ್ಲಿ ಹೊಸ ವರ್ಷ ಆಚರಣೆಗೆಂದು ನಂದಿಗಿರಿದಾಮಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆ ಇದ್ದು, ಸ್ವಚ್ಛತೆ ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹೊಸ ವರುಷದ ಸಂದರ್ಭದಲ್ಲಿ ನಂದಿಗಿರಿಧಾಮಕ್ಕೆ ಪ್ರವೇಶ ನಿರಾಕರಣೆ ಮಾಡಲಾಗಿದೆ.
ಈ ರಸ್ತೆಯು ಅಂಕುಡೊಂಕ್ಕಾಗಿದ್ದು ಹೊಸ ವರ್ಷ ಸಂದರ್ಭ ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತ ಆಗುವ ಸಾಧ್ಯತೆಗಳು ಇರುತ್ತದೆ. ಈ ಕಾರಣದಿಂದಾಗಿ ಪ್ರವಾಸಿಗರ ಹಿತದೃಷ್ಟಿಯಿಂದ ಇಲ್ಲಿಗೆ ಪ್ರವೇಶವನ್ನು ನಿರ್ಬಂಧ ಮಾಡಲಾಗಿದ್ದು ಜನವರಿ 1ರ ಬೆಳಿಗ್ಗೆ 8 ಗಂಟೆಯ ನಂತರ ಎಂದಿನಂತೆ ಪ್ರವೇಶಕ್ಕೆ ಅವಕಾಶವಿದೆ.