ನವದೆಹಲಿ, ಡಿ 30 (Daijiworld News/ PY): ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ದೇಶದ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯೊಂದು ತಿಳಿಸಿದೆ.
ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸೇವೆಯಿಂದ ನಿವೃತ್ತಿಯಾಗಲು ಇನ್ನೇನು ಒಂದು ದಿನ ಬಾಕಿ ಇರುವಾಗಲೇ ಬಿಪಿನ್ ರಾವತ್ ಅವರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.
ಪ್ರಥಮ ಅಧಿಕಾರಿಯಾಗಿ ನೂತನ ಹುದ್ದೆಗೆ ಏರಲಿರುವ ಜನರಲ್ ಬಿಪಿನ್ ರಾವತ್ ಅವರನ್ನು ಡಿ.31.2016ರಲ್ಲಿ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿತ್ತು.