ಔರಂಗಬಾದ್, ಡಿ 31 (Daijiworld News/MB) : ಸೋಮವಾರ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು ಅದರ ಬೆನ್ನಲ್ಲೇ ಬೀಡ್ ಜಿಲ್ಲೆಯ ಎನ್ ಸಿಪಿ ಶಾಸಕ ಪ್ರಕಾಶ್ ಸೊಲಾಂಕೆ ರಾತ್ರಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದು ರಾಜಕೀಯ ಮಾಡಲು ನಮ್ಮಂತವರು ಅರ್ಹರಲ್ಲ ಎಂದು ಹೇಳಿದ್ದಾರೆ.
ಮಜಲ್ಗಾಂವ್ ಕ್ಷೇತ್ರದಿಂದ ನಾಲ್ಕು ಬಾರಿ ಚುನಾಯಿತರಾಗಿರುವ ಸೋಲಾಂಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಲು ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸ್ಥಾನ ಇಲ್ಲದಿರುವುದು ಕಾರಣ ಎಂಬ ಮಾತುಗಳು ಕೇಳಿ ಬರುತ್ತಿದ್ದು ಆದರೆ ಸೊಲಾಂಕೆ ಇದನ್ನು ನಿರಾಕರಿಸಿದ್ದಾರೆ.
ಸಂಪುಟ ವಿಸ್ತರಣೆಯು ನಾಣು ರಾಜಕೀಯ ಮಾಡಲು ಅರ್ಹನಲ್ಲ ಎಂಬುದನ್ನು ತೋರಿಸಿದೆ. ಮಂಗಳವಾರ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ದೂರ ಉಳಿಯುತ್ತೇನೆ ಎಂದು ತಿಳಿಸಿದ್ದಾರೆ.
ಹಾಗೆಯೇ ಅವರು, "ನನಗೆ ಯಾವುದೇ ನಾಯಕರ ಮೇಲೆ ಅಸಮಧಾನವಿಲ್ಲ, ನಾನು ರಾಜೀನಾಮೆ ನೀಡುವುದರ ಕುರಿತು ಎನ್ಸಿಪಿ ನಾಯಕರಿಗೆ ತಿಳಿಸಿದ್ದೇನೆ. ಮಂಗಳವಾರ ಮಧ್ಯಾಹ್ನ ಸ್ಫೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಸಂಪುಟ ವಿಸ್ತರಣೆಗೂ ನನ್ನ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ನಡೆದ ಸಂಪುಟ ವಿಸ್ತರಣೆಯಲ್ಲಿ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಹಾಗೂ 36 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.