ಬೆಂಗಳೂರು, ಡಿ 31 (Daijiworld News/PY) : ಬಡ ಜನರು ಹೆಚ್ಚು ಬಳಕೆ ಮಾಡುವ ಕಡಿಮೆ ದರದ ಮದ್ಯವನ್ನು ಸಬ್ಸಿಡಿ ದರದಲ್ಲಿ ಕೊಡಬೇಕೆಂದು ಸರ್ಕಾರದ ಚಿಂತನೆ ಇದೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ಸರಬರಾಜು ಮಾಡುವ ಯೋಜನೆ ರೂಪಿಸಲಾಗುತ್ತಿದೆ ಹಾಗೆಯೇ ಇನ್ನು ಮುಂದೆ ಮದ್ಯದಂಗಡಿಗಳು ರಾತ್ರಿ 2 ಗಂಟೆಯವರೆಗೂ ಕಾರ್ಯನಿರ್ವಹಿಸಲಿದೆ ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದ್ದಾರೆ.
ವಿಕಾಸಸೌಧದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ಪೂರೈಕೆ ಮಾಡುವ ಬಗ್ಗೆಯೂ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ನೀಡುವುದು ಸರ್ಕಾರದ ಚಿಂತನೆಯಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ಕೂಡ ಹದಗೆಡದಂತೆ ಕಾಪಾಡಬಹುದು ಎಂದು ಅವರು ತಿಳಿಸಿದರು.
ಅಂದಹಾಗೆ ನಾಗೇಶ್ ಹೇಳಿಕೆ ವೈಯಕ್ತಿಕವಾಗಿ ಕೊಟ್ಟಿರೋದಾ? ಸರ್ಕಾರ ಮಟ್ಟದಲ್ಲಿ ನಡೆದಿರುವ ಬೆಳವಣಿಗೆನಾ ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಏಕೆಂದರೆ ಈ ಹಿಂದೆ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುತ್ತೇವೆ, ಹೋಮ್ ಡೆಲಿವರಿ ಇದೆ ಎಂದಿದ್ದರು.
ನಾಗೇಶ್ ಹೋಮ್ ಡೆಲಿವರಿ ಹೇಳಿಕೆ ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿತ್ತು.ಆದರೆ, ನಾಗೇಶ್ ಹೇಳಿಕೆ ವೈಯಕ್ತಿಕವಾಗಿ ಕೊಟ್ಟಿರೋದಾ? ಸರ್ಕಾರ ಮಟ್ಟದಲ್ಲಿ ನಡೆದಿರುವ ಬೆಳವಣಿಗೆನಾ ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ನಾಗೇಶ್ ಹೇಳಿರುವ ಹೇಳಿಕೆಯನ್ನು ತಿಳಿದು ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯಪ್ರವೇಶ ಮಾಡಿ ಹೋಮ್ ಡೆಲಿವರಿ ಚಿಂತನೆ ಇಲ್ಲ ಎಂದು ಹೇಳಿ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಆದರೆ ಈಗ ಮತ್ತೆ ಸಬ್ಸಿಡಿ ದರದಲ್ಲಿ ಮದ್ಯ ನೀಡುತ್ತೇವೆ ಎನ್ನುವ ಹೇಳಿಕೆ ವಿವಾದಕ್ಕೆ ತಿರುಗಿದ್ದು, ಯಡಿಯೂರಪ್ಪ ಅಬಕಾರಿ ಸಚಿವರ ಚಿಂತನೆಯ ಬಗ್ಗೆ ಯಾವ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂಬದನ್ನು ತಿಳಿಯಬೇಕಿದೆ.