ಮೈಸೂರು, ಜ 01 (Daijiworld News/MB) : ಕರ್ನಾಟಕ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಸಿಎಎ ವಿರೋಧಿಸಿ ರಾಜ್ಯಾದ್ಯಂತ ರಂಗೋಲಿ ಸ್ಪರ್ಧೆ ಏರ್ಪಡಿಸುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.
ಮಂಗಳವಾರ ನಗರದ ಪರ್ತಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, "ಮೊದಲ ಬಾರಿಗೆ ಜ.2ರಂದು ಈ ಪ್ರತಿಭಟನೆಯನ್ನು ಮೈಸೂರಿನಿಂದ ಆರಂಭ ಮಾಡಿ ನಂತರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಈ ವಿನೂತನ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಈ ಕಾರ್ಯಕ್ರಮವನ್ನು ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ನಡೆಸಲು ನಿರ್ಧಾರ ಮಾಡಿ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಅವರು ಅನುಮತಿ ನೀಡಿಲ್ಲ. ಪ್ರತಿಭಟನೆ ನಮ್ಮ ಹಕ್ಕು ಎಂದರು.