ಬೆಂಗಳೂರು, ಜ 01 (Daijiworld News/MB) : ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದ ಅಬಕಾರಿ ಸಚಿವ ಹೆಚ್.ನಾಗೇಶ್ ಅವರು ಇದೀಗ ತನ್ನ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ.
ವಿಕಾಸ ಸೌಧದಲ್ಲಿ ಮಾತನಾಡಿದ ಅವರು, "ಈಗಾಗಲೇ ಕಡಿಮೆ ದರದಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದ್ದು ಇನ್ನು ಕಡಿಮೆ ದರದಲ್ಲಿ ಉತ್ತಮ ಗುಣಪಮಟ್ಟದ ಮದ್ಯ ಮಾರಾಟ ಮಾಡುವ ಕುರಿತು ಚರ್ಚೆ ನಡೆಸಲಾಗುವುದು. ಹಾಗೆಯೇ ಗ್ರಾಮೀಣ ಪ್ರದೇಶದಲ್ಲಿರುವ ಮದ್ಯ ಮಾರಾಟ ಹೆಚ್ಚಳಕ್ಕಾಗಿ ಸಬ್ಸಿಡಿ ದರದಲ್ಲಿ ಮದ್ಯ ಪೂರೈಕೆ ಮಾಡುವುದರ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.
ಆದರೆ ಈಗ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು ಅಂತಹ ಯಾವ ವಿಚಾರವೂ ಪ್ರಸ್ತಾಪ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.