ಬೆಂಗಳೂರು, ಜ.01 (Daijiworld News/PY) : ಭಾರತದ ಪ್ರಥಮ ಮಹಿಳಾ ಶಿಕ್ಷಕಿ, ಮಾತೆ ಸಾವಿತ್ರಿ ಬಾಯಿ ಫುಲೆ ಅವರ ಜಯಂತಿಯನ್ನು ಪ್ರತಿ ವರ್ಷವೂ ಜ.3ರಂದು ಶಾಲಾ ಕಾಲೇಜುಗಳಲ್ಲಿ ಆಚರಿಸುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಾವಿತ್ರಿ ಬಾಯಿ ಫುಲೆ ಅವರ ಜಯಂತಿಯಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ಮಾಲೆ ಹಾಕಿ ಗೌರವ ಸಮರ್ಪಣೆ ಮಾಡಬೇಕು.
ಪ್ರಾರ್ಥನಾ ಸಮಯದಲ್ಲಿ ಮತ್ತು ಶಾಲಾ ಅವಧಿಯಲ್ಲಿ ಅವರ ಜೀವನಗಾಥೆ, ಸಾಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತೆ ಇಲಾಖೆಯು ಆದೇಶ ಹೊರಡಿಸಿದೆ.