ಲಕ್ನೋ, ಜ.01 (Daijiworld News/PY) : ಉತ್ತರ ಪ್ರದೇಶ ಸರ್ಕಾರವು ಪಿಎಫ್ಐ ನಿಷೇಧಿಸುವಂತೆ ಕೋರಿ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶ ಸರ್ಕಾರವು ಗೃಹ ಇಲಾಖೆಗೆ ಪಿಎಫ್ಐ ನಿಷೇಧಿಸುವಂತೆ ಕೋರಿ ಪತ್ರ ಬರೆದಿದ್ದು, ಗೃಹ ಇಲಾಖೆಯು ಕ್ರಮಕೈಗೊಳ್ಳುವ ಮೊದಲು ಕಾನೂನು ಸಲಹೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಅಲ್ಲದೇ ಗುಪ್ತಚರ ಹಾಗೂ ಸರ್ಕಾರದ ಇತರ ಮೂಲಗಳಿಂದ ಮಾಹಿತಿ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದ ಡಿಜಿಪಿ ಒ.ಪಿ.ಸಿಂಗ್ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದು, ಪಿಎಫ್ಐನಲ್ಲಿರುವ ಕೆಲ ಸಿಮಿ ಸದಸ್ಯರು ಹಿಂಸೆಗೆ ಉತ್ತೇಜನ ನೀಡಿದ್ದಾರೆ. ಈ ಹಿನ್ನೆಲೆ ಇತ್ತೀಚೆಗೆ ಸುಮಾರು 22 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೇ, ದೆಹಲಿ, ಆಂಧ್ರ ಪ್ರದೇಶ, ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ಜಾರ್ಖಂಡ್ ಹಾಗೂ ಉತ್ತರ ಪ್ರದೇಶಗಳಲ್ಲಿ ಪಿಎಫ್ಐ ಸಕ್ರಿಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.