ನವದೆಹಲಿ, ಜ 02 (Daijiworld News/MSP): ದೆಹಲಿಯ ಪೀರಾಘರ್ಹಿಯ ಕಾರ್ಖಾನೆಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯ ನಡೆಸುತ್ತಿದ್ದ ವೇಳೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ, ಕಾರ್ಖಾನೆಯ ಕಟ್ಟಡದ ಕುಸಿದು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಹಲವಾರು ಜನರು ಅವಶೇಷಗಳಡಿ ಸಿಲುಕಿರುವ ಘಟನೆ ಪಶ್ಚಿಮ ದೆಹಲಿಯ ಗುರುವಾರ ನಡೆದಿದೆ.
ಕಾರ್ಖಾನೆಗೆ ಬೆಂಕಿ ಅನಾಹುತ ಆಗಿರುವ ಬಗ್ಗೆ ಮುಂಜಾನೆ 4.30ಕ್ಕೆ ಅಗ್ನಿಶಾಮಕ ಇಲಾಖೆ ಕರೆಬಂತು. ತಕ್ಷಣ 7 ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ 35 ಅಗ್ನಿಶಾಮಕ ಟೆಂಡರ್ಗಳನ್ನು ಈಗ ಸ್ಥಳಕ್ಕೆ ರವಾನಿಸಲಾಗಿದ್ದು. ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್ಡಿಆರ್ಎಫ್ ಸಿಬ್ಬಂದಿಯೂ ಕೂಡ ಸ್ಥಳದಲ್ಲಿದ್ದು ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ
ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾಗ ಬೆಂಕಿ ಜ್ವಾಲೆಯ ತೀವ್ರತೆಗೆ ಕಟ್ಟಡ ಒಂದು ಭಾಗ ಕುಸಿದಿದೆ. ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಅನೇಕರು ಕಟ್ಟಡ ಅವಶೇಷಗಳಡಿ ಸಿಲುಕಿದ್ದಾರೆ.