ತುಮಕೂರು, ಜ 02 (Daijiworld News/MB) : ಕಳೆದ ಭೀಕರ ಮಳೆ, ಪ್ರವಾಹದಿಂದ ರಾಜ್ಯದಲ್ಲಿ 30 ಸಾವಿರ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಹೀಗಾಗಿ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಈ ಮೊದಲು ಮನವಿ ಸಲ್ಲಿಸಿದ್ದೇನೆ. ರಾಜ್ಯಕ್ಕೆ 50 ಸಾವಿರ ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿ ಮಾಡಿದರು.
ಗುರುವಾರ ತುಮಕೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಗತಿಪರ ರೈತರಿಗೆ ರಾಷ್ಟ್ರ ಮಟ್ಟದ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಎಸ್ ವೈ ಮಾತನಾಡಿ, "ಪ್ರಗತಿಪರ ರೈತರಿಗೆ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿರುವುದು ನಮಗೆ ಹೆಮ್ಮೆಯ ವಿಚಾರ" ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ ರೈತರ ಆದಾಯವನ್ನು 2022ರೊಳಗೆ ದ್ವಿಗುಣಗೊಳಿಸಬೇಕೆಂಬ ಗುರಿಯನ್ನು ಹೊಂದಲಾಗಿದೆ. ಹಾಗೆಯೇ ನದಿ ಜೋಡಣೆಯಂತಹ ಯೋಜನೆಯನ್ನು ಜಾರಿಗೊಳಿಸಬೇಕಾಗಿದೆ. ನೀರಾವರಿ ಯೋಜನೆ ಪೂರ್ಣಗೊಳಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.