ಕೋಲ್ಕತ್ತಾ, ಜ 3(Daijiworld News/MSP): ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಹಿಂದೂಸ್ತಾನದ ಹೆಚ್ಚು ಮಾತನಾಡುವುದಕ್ಕಿಂತ ಪಾಕಿಸ್ತಾನ ರಾಯಭಾರಿಯಂತೆ ದಿನವಿಡೀ ಅಲ್ಲಿಯ ವಿಚಾರಗಳ ಬಗ್ಗೆಯೇ ಮಾತನಾಡುತ್ತಿರುತ್ತಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.
ತುಮಕೂರಿನಲ್ಲಿ ಗುರುವಾರ ನಡೆದ ಸಮಾವೇಶದಲ್ಲಿ ಭಾಗವಹಿಸ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ , ಸಂಸತ್ತಿನಲ್ಲಿ ಆಕ್ರೋಶ ವ್ಯಕ್ತಪಡಿಸುವ ಬದಲು ಪಾಕಿಸ್ತಾನದಲ್ಲಿ ದೌರ್ಜನ್ಯಕ್ಕೊಳಗಾದ ದಲಿತರು ಹಾಗೂ ಶೋಷಿತರ ಪರವಾಗಿ ದ್ವನಿ ಎತ್ತಿ, ಪಾಕ್ ನಲ್ಲಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ಕಿರುಕುಳದ ವಿರುದ್ದ ಪ್ರತಿಭಟಿಸಿ ಎಂದು ವಿಪಕ್ಷಗಳನ್ನು ತರಾಟೆಗೆತ್ತಿಕೊಂಡಿದ್ದರು.
ಉತ್ತರ ಬಂಗಾಳದಲ್ಲಿ ಶುಕ್ರವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮಾತಿಗೆ ತಿರುಗೇಟು ನೀಡಿರುವ ದೀದಿ " ಸಂಸ್ಕೃತಿ ಮತ್ತು ಪರಂಪರೆಯಿಂದ ಶ್ರೀಮಂತವಾಗಿರುವ ಭಾರತವನ್ನು ಯಾಕೆ ಸದಾ ಪಾಕಿಸ್ತಾನದೊಂದಿಗೆ ಹೋಲಿಸುತ್ತೀರಾ, ಪಾಕ್ ಬಗ್ಗೆ ನಿಮಗ್ಯಾಕೆ ಕಾಳಜಿ ಪಾಕಿಸ್ತಾನದಂತಾಗಲು ನಾವೇನು ಬಯಸುವುದಿಲ್ಲ ಎಂದರು.
ಪ್ರಧಾನಿ ಮೋದಿ ಅವರಿಗೆ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವುದು ಹೇಗೆ ಚೆನ್ನಾಗಿ ಬಲ್ಲವರಾಗಿದ್ದಾರೆ. ಆದರೆ, ಜನರ ಸ್ವತಂತ್ರ್ಯವನ್ನು ಕಾಪಾಡುವುದೇ ನನ್ನ ಧರ್ಮವಾಗಿದೆ. ಆದರೆ ಈಗ ಪೌಇರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿಚಾರದಲ್ಲಿ ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷವಾದರೂ ನಮ್ಮ ಪೌರತ್ವವನ್ನು ಸಾಬೀತುಪಡಿಸಿಕೊಳ್ಳಬೇಕು ಎನ್ನುವುದು ನಾಚಿಕೆಗೇಡಿನ ಸಂಗತಿ’ ಎಂದು ಹೇಳಿದರು.