ರಾಜಸ್ಥಾನ, ಜ.03 (Daijiworld News/PY) : "ವಿರೋಧಗಳೇನೆ ಬಂದರೂ ಪೌರತ್ವ ಕಾಯ್ದೆ ಜಾರಿಯ ವಿಚಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತಿಳಿಸಿದ್ದಾರೆ.
ರಾಜಸ್ಥಾನದ ಜೋಧಪುರದಲ್ಲಿ ಪೌರತ್ವ ಕಾಯ್ದೆಯ ಕುರಿತು ಜಾಗೃತಿ ಮೂಡಿಸುವ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅಮಿತ್ ಶಾ ಅವರು, "ಪೌರತ್ವ ಕಾಯ್ದೆಯ ವಿಚಾರವಾಗಿ ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಅಪಪ್ರಚಾರ ಮಾಡುತ್ತಿದ್ದಾರೆ" ಎಂದು ತಿಳಿಸಿದರು.
"ಅಲ್ಪಸಂಖ್ಯಾತರ ವಿರೋಧಿಯೆಂದು ಭಾರತೀಯ ಜನತಾ ಪಕ್ಷವನ್ನು ಆರೋಪಿಸುತ್ತಿದ್ದಾರೆ. ಆದರೆ ವಿರೋಧ ಪಕ್ಷಗಳು ಅಲ್ಪಸಂಖ್ಯಾತರ ಹೆಸರಲ್ಲಿ ಪ್ರತಿಭಟನೆ ನಡೆಸಿ ಓಟ್ಬ್ಯಾಂಕ್ ರಾಜಕೀಯ ಮಾಡುತ್ತಿದೆ" ಎಂದು ತಿಳಿಸಿದರು.
"ಪೌರತ್ವ ಕಾಯ್ದೆಯು ಪೌರತ್ವವನ್ನು ನೀಡುತ್ತದೆಯೇ ಹೊರತು, ಯಾವೊಬ್ಬ ದೇಶದ ನಾಗರಿಕರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ" ಎಂದು ಹೇಳಿದರು.