ನವದೆಹಲಿ, ಜ 04(Daijiworld News/MSP): ಕೇಂದ್ರ ಸರ್ಕಾರವು ಅರ್ಥಿಕ ಹಿಂಜರಿತಕ್ಕೆ ಕಾರಣವಾಗಿರುವ ನೀತಿಗಳನ್ನು ಬದಲಾಯಿಸಬೇಕು ಸಹಿತ ವಿವಿಧ ಬೇಡಿಕೆಗಳ ಈಡೇರಿಸಿ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಜ.8ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಇನ್ನೊಂದೆಡೆ ಕಾರ್ಮಿಕ ಒಕ್ಕೂಟಗಳು ಕರೆ ನೀಡಿರುವ ಭಾರತ್ ಬಂದ್ ಗೆ ಭಾರತೀಯ ಬ್ಯಾಂಕ್ ಅಸೋಸಿಯೇಷನ್ ಕೂಡ ಬೆಂಬಲ ಸೂಚಿಸಿದೆ.
ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಯಿಂದ ಕೆಲಸ ಕಳೆದುಕೊಂಡಿರುವ ಕಾರ್ಮಿಕರ ನೆರವಿಗೆ ಬರಬೇಕು ಹಾಗೂ ಕಾರ್ಮಿಕರ ಕೆಲಸದ ಭದ್ರತೆಗೆ ಸರ್ಕಾರ ಮುಂದಾಗಬೇಕು, ರಾಷ್ಟ್ರವ್ಯಾಪಿ ಏಕಸ್ವರೂಪದ ಕನಿಷ್ಠ ವೇತನ ನಿಗದಿಯಾಗಬೇಕು ಮುಂತಾದ ಬೇಡಿಕೆಗೆ ಆಗ್ರಹಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ಸುಧಾರಣೆ ನೀತಿ ವಿರೋಧಿಸಿ ಆರ್ಎಸ್ಎಸ್ ಅಂಗ ಸಂಸ್ಥೆ ಭಾರತೀಯ ಮಜ್ದೂರ್ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ತೀರ್ಮಾನಿಸಿವೆ.
ಎಸ್ಬಿಐ ಸೇರಿದಂತೆ ಬ್ಯಾಂಕ್ ಅಸೋಸಿಯೇಷ್ನ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎಸ್ಬಿಐ ತಿಳಿಸಿದೆ.