ನವದೆಹಲಿ, ಜ 04 ( Dajiworld News/MB) : ಜಮ್ಮು-ಕಾಶ್ಮೀರದ ಗಂದೇರ್ ಬಾಲ್ ನಲ್ಲಿ ಲಷ್ಕರ್ ಎ ತೊಯ್ಬಾದ (ಎಲ್ಇಟಿ) ಭಯೋತ್ಪಾದಕನನ್ನು ಭದ್ರತಾ ಪಡೆ ಬಂಧನ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಲಷ್ಕರ್ ಉಗ್ರ ನಿಸ್ಸಾರ್ ಅಹ್ಮದ್ ದಾರ್ ಹಲವು ಬಾರಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಪಿತೂರಿ ನಡೆಸಿದ್ದು ಈತ ಪೊಲೀಸರ ವಾಂಟೆಡ್ ಪಟ್ಟಿಯಲ್ಲಿ ಇದ್ದ ಎಂದು ವರದಿ ತಿಳಿಸಿದೆ.
ಈತ ಆಸ್ಪತ್ರೆಯಲ್ಲಿ ಇರುವ ಕುರಿತು ಖಚಿತ ಮಾಹಿತಿ ಪಡೆದ ಶ್ರೀನಗರ್ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆ ನಡೆಸಿ ಆತನನ್ನು ಬಂಧನ ಮಾಡಿದ್ದು ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಎಲ್ ಇಟಿ ಉಗ್ರ ದಾರ್ನನ್ನು ಭಾರತೀಯ ಭದ್ರತಾ ಪಡೆಯ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು ಶ್ರೀನಗರದಲ್ಲಿ ಪಾಕಿಸ್ತಾನದ ಹಲವು ಉಗ್ರಗಾಮಿ ಸಂಘಟನೆಗಳು ಇವೆ ಎಂದು ಮಾಹಿತಿ ನೀಡಿದ್ದಾರೆ.