ನವದೆಹಲಿ, ನ.07 (DaijiworldNews/AK):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2029ರಲ್ಲಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಅವರು ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗಬಹುದು ಎಂಬ ಅಮಿತ್ ಶಾ ಹೇಳಿಕೆ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2029ರವರೆಗೆ ಕಾಯುವಂತೆ ಸವಾಲು ಹಾಕಿದ್ದಾರೆ.
ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಮುಂದೆ ಏನಾಗಲಿದೆ ಎಂಬುದನ್ನು ಅವರೇ ಯೋಚಿಸಲಿ ಎಂದು ಹೇಳಿದ್ದಾರೆ. ಸ್ವಲ್ಪ ಸಮಯ ಕಾಯಿರಿ. ನಮ್ಮ ಮಾತನ್ನು ನೆನಪಿಟ್ಟುಕೊಳ್ಳಿ. ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಲಿದ್ದಾರೆ. 2029ರವರೆಗೆ ಕಾಯಿರಿ. ದೇಶದ ಜನರು ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ. ಆದರೆ, ಅವರ ಹೋರಾಟ ಕೇವಲ ಪ್ರಧಾನಿ ಹುದ್ದೆಗಾಗಿ ಅಲ್ಲ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವುದು, ಸಾಮಾನ್ಯ ಜನರ ಮತದಾನದ ಹಕ್ಕುಗಳನ್ನು ರಕ್ಷಿಸುವುದು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವುದೇ ಇಂಡಿಯಾ ಮೈತ್ರಿಕೂಟದ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.