ಕೋಲಾರ, ಜ 04 ( Dajiworld News/MB) : ಪೂರ್ವನುಮತಿ ಇಲ್ಲದೆ ಸಿಎಎ ಪರ ಪ್ರತಿಭಟನೆ ನಡೆಸಿದ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಕೋಲಾರದ ಎಸ್ಎನ್ಆರ್ ಸರ್ಕಲ್ ಬಳಿ ನಡೆದಿದೆ.
ಈ ರ್ಯಾಲಿಯನ್ನು ಕೋಲಾರ ಸಂಸದ ಮುನಿಸ್ವಾಮಿ ಅವರು ಆಯೋಜನೆ ಮಾಡಿದ್ದು, ರ್ಯಾಲಿಯಲ್ಲಿ ಭಾಗವಹಿಸಲೆಂದು ಬಿಜೆಪಿಯ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೂಡಾ ಕೋಲಾರಕ್ಕೆ ಆಗಮಿಸಿದ್ದರು.
ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಎಸ್ಎನ್ಆರ್ ಆಸ್ಪತ್ರೆ ವೃತ್ತದ ಬಳಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದು ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರ ಎಚ್ಚರಿಕೆ ನೀಡಿದರೂ ಪೊಲೀಸ್ ಬ್ಯಾರಿಕೇಡ್ಗಳನ್ನು ದಾಟಲು ಯತ್ನಿಸಿದ್ದು ಪೊಲೀಸರು ಲಾಠಿಚಾರ್ಚ್ ಮಾಡಿದ್ದಾರೆ.