ಜಮ್ಮು, ನ.11 (DaijiworldNews/AA): ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಬುಧವಾರ ಮಧ್ಯಾಹ್ನ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ಪಿಎಫ್) ಚೆಕ್ಪೋಸ್ಟ್ ಮೇಲೆ ಬುಧವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಿರ್ ಬಜಾರ್ ಬಳಿಯ ಅಖ್ರಾನ್ನಲ್ಲಿರುವ ಸಿಆರ್ಪಿಎಫ್ ಶಿಬಿರದ ಮೇಲೆ ಬೈಕ್ನಲ್ಲಿ ಬಂದ ಉಗ್ರರು 15 ಸೆಕೆಂಡ್ಗಳಲ್ಲಿ ಸುಮಾರು 30 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ನಂತರದ ಒಂದು ನಿಮಿಷದೊಳಗೆ ಮತ್ತೆ ಸುಮಾರು 12 ಸುತ್ತು ಗುಂಡು ಹಾರಿಸಿದ್ದಾರೆ. ದಾಳಿಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದಾಳಿಕೋರರು ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಅನಂತ್ನಾಗ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಿಆರ್ಪಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ.