ಶ್ರೀನಗರ, ನ.16 (DaijiworldNews/AA): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ಕೌಂಟರ್ನಲ್ಲಿ ನಡೆದಿದ್ದು, ಲಷ್ಕರ್-ಎ-ತೊಯ್ಬಾ ಸಂಘಟನೆಯ ಪ್ರಮುಖ ಕಮಾಂಡರ್ ಲತೀಫ್ ಭಟ್ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ನವೆಂಬರ್ 11ರಂದು ಕುಲ್ಗಾಮ್ನ ಮೀರ್ ಬಜಾರ್ ಸಮೀಪದ ಸಿಆರ್ಪಿಎಫ್ ಶಿಬಿರದ ಮೇಲೆ ಇಬ್ಬರು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಗಾಯಗೊಂಡಿದ್ದರು. ದಾಳಿ ನಡೆಸಿದ ಬಳಿಕ ಉಗ್ರರು ಸಮೀಪದ ಅರಣ್ಯ ಪ್ರದೇಶದೊಳಗೆ ಪರಾರಿಯಾಗಿದ್ದರು.
ಘಟನೆಯ ಬಳಿಕ ಭದ್ರತಾ ಪಡೆಗಳು ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದವು. ಸೋಮವಾರ ಕುಲ್ಗಾಮ್ನ ಅನುಮಾನಾಸ್ಪದ ಪ್ರದೇಶವೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಭದ್ರತಾ ಪಡೆಗೆ ದೊರೆತಿತ್ತು. ತಕ್ಷಣ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ವಿಶೇಷ ಪಡೆ ಜಂಟಿ ಕಾರ್ಯಾಚರಣೆ ನಡೆಸಿ ಪ್ರದೇಶವನ್ನು ಸುತ್ತುವರೆದಿದ್ದವು.
ಈ ವೇಳೆ ಭದ್ರತಾ ಪಡೆಗಳನ್ನು ಕಂಡ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ದಾಳಿ ನಡೆಸಿವೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದವರಲ್ಲಿ ಲಷ್ಕರ್ ಕಮಾಂಡರ್ ಲತೀಫ್ ಭಟ್ ಕೂಡ ಇದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.