ಶ್ರೀನಗರ, ನ.18 (DaijiworldNews/AK): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಬುಧವಾರ ಮತ್ತೆ ಗುಂಡಿನ ಚಕಮಕಿ ನಡೆದಿದೆ.

ನವೆಂಬರ್ 11ರಂದು ಸಿಆರ್ಪಿಎಫ್ ಸಿಬ್ಬಂದಿ ಮೇಲೆ ನಡೆದ ದಾಳಿಯ ತನಿಖೆ ಹಾಗೂ ಶೋಧ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ತೀವ್ರಗೊಳಿಸಿವೆ. ಈ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಕಮಾಂಡರ್ ಲತೀಫ್ ಭಟ್ಗಾಗಿ ಹುಡುಕಾಟ ಮುಂದುವರೆದಿದೆ.
ಜಂಗಲ್ಪೋರಾ ಗ್ರಾಮದಲ್ಲಿ ಹೊಸದಾಗಿ ಗುಂಡಿನ ಚಕಮಕಿ ಆರಂಭವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಉಮರ್ ನಿಸಾರ್ ದಾರ್ ಎಂಬ ಶಂಕಿತ ಉಗ್ರ ಸಾವನ್ನಪ್ಪಿದ್ದ. ಆದರೆ, ಮತ್ತೊಬ್ಬ ಶಂಕಿತ ಲತೀಫ್ ಭಟ್ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನ ಪತ್ತೆಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರಿಗಾಗಿ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಬುಧವಾರ ಮುಂಜಾನೆ ಮತ್ತೆ ಗುಂಡಿನ ಚಕಮಕಿಗೆ ತಿರುಗಿದೆ. ಜಂಗಲ್ಪೋರಾ ಗ್ರಾಮದ ಬಳಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ ಆರಂಭವಾಗಿದೆ.
ನವೆಂಬರ್ 11ರಂದು ಸಿಆರ್ಪಿಎಫ್ ಸಿಬ್ಬಂದಿ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಕಮಾಂಡರ್ ಲತೀಫ್ ಭಟ್ ಈ ಪ್ರದೇಶದಲ್ಲಿ ಸುತ್ತುವರೆದಿರುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ, ಆತ ಸಿಕ್ಕಿಬಿದ್ದಿದ್ದಾನೆ ಅಥವಾ ವಶಕ್ಕೆ ಪಡೆದಿದ್ದಾರೆ ಎಂಬ ಅಧಿಕೃತ ದೃಢೀಕರಣ ಸದ್ಯಕ್ಕೆ ಇಲ್ಲ.