ಬೆಂಗಳೂರು, ನ.18 (DaijiworldNews/AK): ಪೆಟ್ರೋಲ್ನಲ್ಲಿ ಹೆಚ್ಚಿನ ಎಥೆನಾಲ್ ಮಿಶ್ರಣ ಆರೋಪ ವಿಚಾರ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿಗೆ ಕರ್ನಾಟಕ ಸಚಿವ ರಿಜ್ವಾನ್ ಅರ್ಷದ್ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದ ವರದಿ ಬಗ್ಗೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದು, ಎಥೆನಾಲ್ ಮಿಶ್ರಣ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅತಿಯಾದ ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಹಾನಿ ಆಗ್ತಿದೆ, ಮೈಲೇಜ್ ಕುಸಿಯುತ್ತಿದೆಯೆಂದು ಸಾರ್ವಜನಿಕರಿಂದ ದೂರುಗಳು ಬಂದಿವೆ ಎದು ತಿಳಿಸಿದ್ದಾರೆ.
ಸೆಪ್ಟೆಂಬರ್ನಲ್ಲಿ ರಾಜ್ಯದ ವಿವಿಧ ಪೆಟ್ರೋಲ್ ಬಂಕ್ಗಳಿಂದ ಮಾದರಿ ಸಂಗ್ರಹಿಸಿ ಅವನ್ನು NABL-ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಲಾಗಿದೆ. 14 ಮಾದರಿಗಳ ಪೈಕಿ 11 ಮಾದರಿಗಳು ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಕ್ಸ್ ಆಗಿರೋದು ಕಂಡುಬಂದಿದೆ. ಎಥೆನಾಲ್ ಪ್ರಮಾಣ ಒಂದೇ ಸಮನಾಗಿಲ್ಲದೆ ಶೇ.13.5ರಿಂದ 31.2ರವರೆಗೆ ಇದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಪೆಟ್ರೋಲ್ ಡಿಸ್ಪೆನ್ಸರ್ಗಳ ಪರಿಶೀಲನೆ 12 ತಿಂಗಳಿಂದ 24 ತಿಂಗಳಿಗೆ ಹೆಚ್ಚಳ ಸಂಬಂಧ ಕೇಂದ್ರದ ಅಧಿಸೂಚನೆಗೆ ರಾಜ್ಯ ಸರ್ಕಾರದ ವಿರೋಧವಿದೆ ಎಂದವರು ಹೇಳಿದ್ದಾರೆ.
ಪೆಟ್ರೋಲ್ ಬಂಕ್ನಲ್ಲಿ ಎಥೆನಾಲ್ ಶೇಕಡಾವಾರು ಪ್ರಮಾಣ ಪ್ರದರ್ಶಿಸುವ ಜೊತೆಗೆ ಗ್ರಾಹಕರಿಗೆ ನೀಡುವ ಬಿಲ್ನಲ್ಲಿ ಎಥೆನಾಲ್ ಶೇಕಡಾವಾರು ನಮೂದಿಸಬೇಕು. ಎಥೆನಾಲ್ ಮಿಶ್ರಣದಿಂದ ವಾಹನ ಹಾನಿಗೊಳಗಾದರೆ ಪರಿಹಾರ ನೀಡಲು ಪ್ರತ್ಯೇಕ ನಿಧಿ ರಚಿಸಬೇಕು. ಎಂದು ಪತ್ರದ ಮೂಲಕ ರಿಜ್ವಾನ್ ಮನವಿ ಮಾಡಿದ್ದಾರೆ. ಶೇ.90ರಷ್ಟು ಬಂಕ್ಗಳ ನಳಿಕೆಗಳಲ್ಲಿ ವ್ಯತ್ಯಾಸ ಇರುವುದು ಪತ್ತೆಯಾಗಿದ್ದು, ಗ್ರಾಹಕರಿಗೆ ಕಡಿಮೆ ಇಂಧನ ಸಿಗುತ್ತಿರುವುದು ಸಾಬೀತಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.