ಬೆಂಗಳೂರು, ನ.18 (DaijiworldNews/AK): ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಅಗ್ನಿಶಾಮಕ ದಳ ಎಡಿಜಿಪಿಯಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ಇಂದು (ನವೆಂಬರ್ 18) ಆದೇಶ ಹೊರಡಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರನ್ನು ಅಮಾನತುಗೊಳಿಸಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಹೊಸ ಆಯುಕ್ತರನ್ನಾಗಿ ನೇಮಿಸಲಾಗಿತ್ತು.
ಇದೀಗ ನೂತನ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.