ಲಕ್ನೋ, ಜ.05 (Daijiworld News/PY) : ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ದೇಶದಾತ್ಯಂತ ಭಾರಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರಪ್ರದೇಶ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಆದೇಶ ನೀಡಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಬಂದಿರುವ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು,ಪಾರ್ಸಿಗಳು ಹಾಗೂ ಕ್ರಿಶ್ಚಿಯನ್ನರನ್ನು ಗುರುತಿಸುವಂತೆ ಆದೇಶಿಸಲಾಗಿದೆ.
ಉತ್ತರ ಪ್ರದೇಶವು ಪೌರತ್ವ ನೀಡಲು ಅರ್ಹವಿರುವ ವಲಸಿಗರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸುವ ಪ್ರಕ್ರಿಯೆಗೆ ಮುಂದಾಗಿರುವ ಮೊದಲ ರಾಜ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಪೌರತ್ವವನ್ನು ಪಡೆಯದೇ ರಾಜ್ಯದಲ್ಲಿ ದಶಕಗಳಿಂದ ನೆಲೆ ನಿಂತಿರುವ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದ ವಲಸಿಗರನ್ನು ಪತ್ತೆಮಾಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ತಿಳಿಸಲಾಗಿದೆ. ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾಗಿ ರಾಜ್ಯದಲ್ಲಿ ನೆಲೆನಿಂತ ವಲಸಿಗರ ಸಂಖ್ಯೆ ಗಣನೀಯವಾಗಿದೆ ಎಂದು ಹೆಚ್ಚುವರಿ ಕಾರ್ಯದರ್ಶಿ ಅವನೀಶ್ ಅವಸ್ಥಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.