ಬೆಂಗಳೂರು, ಜ.06 (Daijiworld News/PY) : ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್.ಚತುರ್ವೇದಿ (90) ಉತ್ತರ ಪ್ರದೇಶದ ನೋಯ್ಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಟಿ.ಎನ್.ಚತುರ್ವೇದಿ ಅವರು ನೋಯ್ಡಾದ ಖಾಸಗಿ ಆಸ್ಪತ್ರೆಯಲ್ಲಿ ಜ.5ರಂದು ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಟಿ.ಎನ್.ಚತುರ್ವೇದಿ ಅವರು ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದರು.
ಆಗಸ್ಟ್ 2002ರಿಂದ 20 ಆಗಸ್ಟ್ 2007ವರೆಗೆ ರಾಜ್ಯಪಾಲರಾಗಿದ್ದರು. ಇದಕ್ಕೂ ಮುನ್ನ ಭಾರತದ ಮಹಾಲೇಖಪಾಲರಾಗಿ 1984 ರಿಂದ 1989ರವರೆಗೆ ಕಾರ್ಯನಿರ್ವಹಿಸಿದ್ದರು.
ಟಿ.ಎನ್.ಚತುರ್ವೇದಿ ಅವರಿಗೆ 1990ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದ್ದರು.