ಬೆಂಗಳೂರು, ಜ.06 (Daijiworld News/PY) : ಪ್ರಸ್ತುತ ವರ್ಷದ ಮೊದಲನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜ.19ರಂದು ಹಮ್ಮಿಕೊಳ್ಳಲಾಗಿದೆ.
ರಾಷ್ಟ್ರ ವ್ಯಾಪ್ತಿ ಒಂದೇ ದಿನ ನಡೆಯುವ ಪೋಲಿಯೋ ಕಾರ್ಯಕ್ರಮವು ಪೋಲಿಯೋ ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಿ ಪೋಲಿಯೋ ಮುಕ್ತವನ್ನಾಗಿಸಲು ಕೇಂದ್ರ ಸರ್ಕಾರ ದೇಶದ್ಯಾಂತ ರಾಷ್ಟ್ರೀಯ ಪೋಲಿಯೋ ಕಾರ್ಯಕ್ರಮವನ್ನು ಆಯೋಜಿಸಿದ್ದು ಈ ಮೂಲಕ ಪೋಲಿಯೋ ಮುಕ್ತ ದೇಶವನ್ನಾಗಿಸಲು ಪಣ ತೊಟ್ಟಿದೆ.
ನವಜಾತ ಶಿಶುಗಳಿಗೆ ನೀಡುವ "೦" ಪೋಲಿಯೋ ಲಸಿಕೆ ಡೋಸ್, 16-23 ತಿಂಗಳ ವಯಸ್ಸಿನಲ್ಲಿ ಮಕ್ಕಳಿಗೆ ಮೂರು ಬಾರಿ ಲಸಿಕೆಯನ್ನು ಹಾಕಿಸಲಾಗುತ್ತದೆ.
ಜ.19ರಂದು ಪೋಲಿಯೋ ಬೂತ್ಗಳಲ್ಲಿ ಹಾಗೂ 3 ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡುವ ಮೂಲಕ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ನೀಡುವಂತೆ ವ್ಯವಸ್ಥೆ ಮಾಡಲಾಗುತ್ತದೆ.
ಗ್ರಾಮೀಣ ಪ್ರದೇಶ, ನಗರ ಪ್ರದೇಶಗಳಿಗೆ ವಲಸೆ ಬಂದಿರುವ ಪೋಷಕರಿಗೆ ತಪ್ಪದೇ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.