ಬೆಂಗಳೂರು, ಜ.06 (Daijiworld News/PY) : ರಾಜ್ಯದಲ್ಲಿ ಕಳೆದ ವರ್ಷ ಉಂಟಾಗಿದ್ದ ಭಾರೀ ನೆರೆ, ಪ್ರವಾಹದಿಂದ ಹಾನಿ ಹಿನ್ನೆಲೆ ಕೇಂದ್ರ ಸರ್ಕಾರವು 1869.85 ಕೋಟಿ ರೂ. ಪರಿಹಾರ ಘೋಷಿಸಿದೆ.
ಸೋಮವಾರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಒಟ್ಟು ಏಳು ರಾಜ್ಯಗಳಿಗೆ ನೆರೆ ಪರಿಹಾರ ಬಿಡುಗಡೆ ಮಾಡಿದ್ದು 5908.56 ಕೋಟಿ ಬಿಡುಗಡೆ ಮಾಡಿದೆ.
ಇದರಲ್ಲಿ ಅಸ್ಸಾಂ ಗೆ 616.63 ಕೋಟಿ, ಹಿಮಾಚಲ ಪ್ರದೇಶಕ್ಕೆ 284.93 ಕೋಟಿ, ಕರ್ನಾಟಕಕ್ಕೆ 1869.85 ಕೋಟಿ, ಮಧ್ಯಪ್ರದೇಶಕ್ಕೆ 1749.73 ಕೋಟಿ, ಮಹಾರಾಷ್ಟ್ರಕ್ಕೆ 956.93 ಕೋಟಿ ಮತ್ತು ತ್ರಿಪುರಕ್ಕೆ 63.32 ಕೋಟಿ ಹಾಗೂ ಉತ್ತರ ಪ್ರದೇಶಕ್ಕೆ 367.17 ಕೋಟಿ ಬಿಡುಗಡೆ ಮಾಡಿದೆ.