ಬೆಂಗಳೂರು, ಜ 7 (Daijiworld News/MB) : ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ರೂ. ಬೆಂಬಲ ಬೆಲೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿಗೆ ಭತ್ತಕ್ಕೆ ಬೆಂಬಲ ಬೆಲೆ ನಿಗಧಿ ಮಾಡುವ ಕುರಿತಂತೆ ಮನವಿ ಮಾಡಲು ಕೊಪ್ಪಳ, ಬಳ್ಳಾರಿ, ರಾಯಚೂರು ಭಾಗದ ಜನಪ್ರತಿ ನಿಧಿಗಳು ಹಾಗೂ ರೈತ ಮುಖಂಡರ ನಿಯೋಗ ಸಚಿವ ಬಿ.ಶ್ರೀರಾಮುಲು,ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕ ವೆಂಕಟ ರಾವ್ ನಾಡಗೌಡ ನೇತೃತ್ವದಲ್ಲಿ ಭೇಟಿ ನೀಡಿತ್ತು.
ಈ ಮನವಿ ನೀಡಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ಬೆಂಬಲ ಬೆಲೆ ಘೋಷಿಸಿದ್ದಾರೆ.