ಬೆಂಗಳೂರು, ಜ 8 (Daijiworld News/MB) : ಕೇಂದ್ರ ಸರಕಾರ ಕಾರ್ಮಿಕ ನೀತಿಯನ್ನು ವಿರೋಧ ಮಾಡಿ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದೆ. ಆ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕಾರ್ಮಿಕ ಸಂಘಟನೆಗಳು ಬಂದ್ಗೆ ಕರೆನೀಡಿದ್ದು ಬೆಂಗಳೂರಿನಲ್ಲಿ ಯಥಾಸ್ಥಿತಿಯಿದೆ. ಮಡಿಕೇರಿಯಲ್ಲಿ ಕಲ್ಲು ತೂರಾಟ ನಡೆದಿದೆ.
ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ಎಂದಿನಂತೆ ಸಂಚಾರ ಮಾಡುತ್ತಿದೆ, ಆದರೆ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಜನರ ಓಡಾಟ ಕಡಿಮೆಯಾಗಿದೆ. ಬಸ್ನಲ್ಲಿಯೂ ಪ್ರಯಾಣಿಕರ ವಿರಳವಾಗಿದ್ದಾರೆ.
ರಾಜ್ಯದ ಇತರ ಭಾಗಗಳಲ್ಲೂ ಸಂಚಾರ, ಅಂಗಡಿ ಮುಗ್ಗಟ್ಟುಗಳು ತೆರೆದಿದೆ. ದೇಶದಾದ್ಯಂತ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಅಲ್ಲಲ್ಲಿ ಮುಷ್ಕರಗಳು ನಡೆಯಲಿದೆ. ಶಾಲಾ ಕಾಲೇಜುಗಳಿಗೆ ಯಾವುದೇ ರಜೆ ಘೋಷಣೆ ಮಾಡದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಎಂದಿನಂತೆ ಶಾಲೆಗೆ ತೆರಳಿದ್ದಾರೆ.
ಮಡಿಕೇರಿಯಿಂದ ಮೈಸೂರಿಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಬಸ್ನ ಗಾಜು ಪುಡಿಯಾಗಿದೆ.