ಜಬುವಾ, ಜ 8 (Daijiworld News/MB) : ಮಧ್ಯಪ್ರದೇಶದ ಜಬುವಾ ನಗರದಲ್ಲಿ ನಿಷೇದಾಜ್ಞೆ ಹೇರಿದ್ದರೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದ ರತ್ಲಾಮ್ - ಜಾಬುವಾ ಸಂಸದ ಗುಮನ್ ಸಿಂಗ್ ದಾಮರ್ ಸೇರಿದಂತೆ 61 ಜನ ಬಿಜೆಪಿ ನಾಯಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧ ಮಾಡಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನಲೆಯಲ್ಲಿ ನಗರದಲ್ಲಿ ನಿಷೇದಾಜ್ಞೆ ಹೇರಲಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ರ್ಯಾಲಿ ನಡೆಸಿದ್ದಾರೆ.
ಮಂಗಳವಾರ 61 ಜನ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು 200 ರಿಂದ 300 ಜನರ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.