ನವದೆಹಲಿ, ಜ 08 (Daijiworld News/MSP): ಇರಾಕ್ ಹಾಗೂ ಅಮೆರಿಕ ನಡುವೆ ಯುದ್ದ ಕರ್ಮೋಡ ಆವರಿಸಿಕೊಂಡಿರುವ ಬೆನ್ನಲ್ಲೇ ತೈಲ ಬೆಲೆ ಏರಿಕೆಯಾಗತೊಡಗಿದೆ ಎಂದು ವರದಿಯಾಗುತ್ತಿದೆ, ಈ ಹಿನ್ನಲೆಯಲ್ಲಿ ಭಾರತದಲ್ಲೂ ಪೆಟ್ರೋಲ್ - ಡಿಸೀಲ್ ಬೆಲೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ.
ಕೊಲ್ಲಿ ಪ್ರಾಂತ್ಯದಲ್ಲಿ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂಧನ ಸಮಸ್ಯೆಯ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಯಾವುದೇ ಪರಿಸ್ಥಿತಿ ಎದುರಿಸಲು ಸರ್ಕಾರ ಸಕಲ ಸಿದ್ಧತೆ ನಡೆಸುತ್ತಿದೆ ಮಾತ್ರವಲ್ಲದೆ ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ತೈಲ ಉತ್ಪಾದಕ ರಾಷ್ಟ್ರಗಳೊಂದಿಗೆ ಭಾರತ ಸಂಪರ್ಕದಲ್ಲಿದೆ ಎಂದು ಪ್ರಧಾನ್ ತಿಳಿಸಿದ್ದಾರೆ.
ಕೊಲ್ಲಿ ಪ್ರಾಂತ್ಯದ ಹಲವು ದೇಶಗಳ ವಿದೇಶಾಂಗ ಸಚಿವರೊಂದಿಗೆ ನಮ್ಮ ವಿದೇಶಾಂಗ ವ್ಯವಹಾರಗಳ ಸಚಿವರ ಡಾ. ಎಸ್.ಜೈಶಂಕರ್ ಅವರು ಮಾತುಕತೆ ನಡೆಸುತ್ತಿದ್ದಾರೆ. ಪ್ರಧಾನಮಂತ್ರಿಯವರ ಕಚೇರಿ ಸೇರಿದಂತೆ ವಿವಿಧ ಮಟ್ಟಗಳಲ್ಲಿ ಪರಿಸ್ಥಿತಿಯನ್ನು ಪರಾಮರ್ಶಿಸಲಾಗುತ್ತಿದೆ ಎಂದು ಪ್ರಧಾನ್ ಸ್ಪಷ್ಟಪಡಿಸಿದ್ದಾರೆ.