ನವದೆಹಲಿ, ಜ 09 (Daijiworld News/MSP) : ಇರಾನ್ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿ ಹತ್ಯೆಗೆ ಪ್ರತೀಕಾರವಾಗಿ ಇರಾಕ್ ವಾಯುನೆಲೆಯಲ್ಲಿರುವ ಅಮೆರಿಕ ಪಡೆಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಅಮೇರಿಕ - ಇರಾಕ್ ನಡುವಿನ ಸಂಘರ್ಷ ಮತ್ತಷ್ಟು ಬಿಗಡಾಯಿಸಿದ ಹಿನ್ನಲೆಯಲ್ಲಿ ಅಗತ್ಯವೆನಿಸಿದರೆ ಅಲ್ಲಿ ನೆಲೆಸಿರುವ ಭಾರತೀಯರನ್ನು ಸ್ಥಳಾಂತರಿಸಲು "ಐಎನ್ ಎಸ್ ತ್ರಿಖಂಡ್ " ಅನ್ನು ಅಲ್ಲಿಗೆ ರವಾನಿಸುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, ಅಮೆರಿಕ ಇರಾನ್ ನಡುವಿನ ಭೌಗೋಳಿಕ-ರಾಜಕೀಯ ಸಂಘರ್ಷದ ಪರಿಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ. 2019ರ ನವೆಂಬರ್’ನಿಂದ ಭಾರತೀಯ ನೌಕಾ ಪಡೆಯ ಹಡಗು "ಐಎನ್ ಎಸ್ ತ್ರಿಖಂಡ್ " ಗಲ್ಫ್ ಆಫ್ ಒಮಾನ್ ನಲ್ಲಿದೆ. ಅಮೇರಿಕ - ಇರಾಕ್ ನಡುವಿನ ಸಂಘರ್ಷದಿಂದ ಪರಿಸ್ಥಿತಿ ತೀರಾ ಬಿಗಡಾಯಿಸಿದರೆ, ಇರಾನ್ ನಲ್ಲಿ ನೆಲೆಸಿರುವ ಭಾರತೀಯರನ್ನು ಸ್ಥಳಾಂತರಿಸಲು ತ್ರಿಖಂಡ್ ನೌಕೆಯನ್ನು ಕಳುಹಿಸಲಾಗುವುದು ಎಂದರು.
ಇರಾನ್ ಹಾಗೂ ಅಮೇರಿಕಾ ಯುದ್ಧಕ್ಕೆ ಉತ್ಸಾಹ ತೋರದೆ, ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕಾಗಿ ಕೇಂದ್ರ ಉಭಯ ದೇಶಗಳಿಗೂ ಮನವಿ ಮಾಡಿದೆ ಎಂದು ಇದೇ ವೇಳೆ ತಿಳಿಸಿದರು.