ಬೆಂಗಳೂರು, ಜ 9 (Daijiworld News/MB) : ನಾನು ಸದ್ಯ ಕನಕಪುರದಲ್ಲಿ ಕಲ್ಲು ಒಡೆಯುತ್ತೇನೆ, ರೇಷ್ಮೆ ಬೆಳೆಯುತ್ತೇನೆ ವಿನಃ ದೆಹಲಿಗೆ ಹೋಗಲ್ಲ. ರಾಜ್ಯದಲ್ಲಿ ರಾಜಕಾರಣ ಮಾಡುತ್ತೇನೆ ಕೆಪಿಸಿಸಿಯಲ್ಲಿ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವ ನಗರದ ನಿವಾಸದಲ್ಲಿ ಮಾತನಾಡಿದ ಅವರು, "ಕೆಪಿಸಿಸಿ ಅಧ್ಯಕ್ಷರ ನೇಮಕಾತಿಯ ಬಗ್ಗೆ ಸಂಬಂಧಪಟ್ಟವರಲ್ಲಿ ಕೇಳಿ, ನಾನೂ ಆ ವಿಚಾರದಲ್ಲಿ ಮಾತನಾಡುವುದಿಲ್ಲ. ನನಗೆ ಯಾವ ಆತುರವೂ ಇಲ್ಲ, ದೆಹಲಿಯಲ್ಲಿ ನಾನು ಎಐಸಿಸಿ ಅಧ್ಯಕ್ಷರನ್ನ ಭೇಟಿ ಮಾಡಿಲ್ಲ, ಅವರೇನು ಅಂಗಡಿಯಲ್ಲಿ ಸಿಗುವ ವಸ್ತುವಲ್ಲ ಎಂದು ಸ್ಪಷ್ಟಪಡಿಸಿದರು.
ನನಗೆ ಸಿಬಿಐ ಮೇಲೆ ನಂಬಿಕೆ ಇದೆ. ಅದು ತನ್ನ ಗೌರವವನ್ನು ಉಳಿಸಿಕೊಂಡಿದೆ. ನನಗೆ ಸಿಬಿಐ ಯಾವುದೇ ನೋಟಿಸ್ ನೀಡಿಲ್ಲ. ನನ್ನ ಮನೆಯ ಸುತ್ತಲೂ ಇರುವಂತೆ ಸಿಬಿಐ ಅವರಿಗೆ ಕೇಂದ್ರ ಮತ್ತು ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಲೋಕಾಯುಕ್ತ, ಎಸಿಬಿ ಇದ್ದರೂ ಸಿಎಂ ಸಿಬಿಐಗೆ ಪತ್ರ ಬರೆದಿದ್ದಾರೆ. ಈ ಕುರಿತು ಎಲ್ಲವನ್ನೂ ನಾನು ಆರ್ಟಿಐ ಮುಖಾಂತರ ದಾಖಲೆ ಪಡೆದುಕೊಂಡಿದ್ದೇನೆ. ಮಾಧ್ಯಮಗಳ ಮುಂದೆ ಏನೂ ಹೇಳುವುದಿಲ್ಲ ಎಂದು ತಿಳಿಸಿದ್ದಾರೆ.