ಕಾರವಾರ, ಜ 09 (DaijiworldNews/SM): ಕಾರವಾರದ ವಾರ್ತಾ ಇಲಾಖೆಯ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಅವರಿಗೆ ಪ್ರಜ್ಞೆ ತಪ್ಪಿದ ಘಟನೆ ನಡೆಯಿತು.
ವಾರ್ತಾ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ವಾರ್ತಾ ಭವನದಲ್ಲಿ 'ವಾರ್ತಾ ಸ್ಪಂದನ' ಫೋನ್ ಇನ್ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮ ಪ್ರಾರಂಭವಾದಾಗ, ವೇದಿಕೆಯಲ್ಲಿ ಕುಳಿತಿದ್ದ ಜಿಲ್ಲಾಧಿಕಾರಿ ಪ್ರಜ್ಞೆ ತಪ್ಪಿದರು.
ತಕ್ಷಣವೇ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿದರು. ಬಳಿಕ ಅವರು ಚೇತರಿಸಿಕೊಂಡರು.
ಕಾರ್ಯಕ್ರಮ ಉದ್ಘ್ಹಾಟಿಸಿದ ಅವರು, ಕಾರ್ಯಕ್ರಮಕ್ಕೆ ಅಡ್ಡಿಯಾಗಬಾರದು ಕ್ಷಮೆ ಕೋರಿ ಕಾರ್ಯಕ್ರಮದಿಂದ ತೆರಳಿ ಆಸ್ಪತ್ರೆಗೆ ತೆರಳಿದರು.