ಬೆಂಗಳೂರು, ಜ.11 (Daijiworld News/PY) : "ಸಂಪುಟ ವಿಸ್ತರಣೆಯ ಬಗ್ಗೆ ಮಾತನಾಡಲು ನಾನು ದೆಹಲಿಗೆ ಹೋಗುತ್ತಿಲ್ಲ, ಜ.17 ಹಾಗೂ 18ಕ್ಕೆ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಆ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಜ.11 ಶನಿವಾರದಂದು ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮಾತಾಡಿದ ಬಿಎಸ್ವೈ, ನಾನು ದೆಹಲಿಗೆ ಹೋಗುತ್ತಿಲ್ಲ, ಅಮಿತ್ ಶಾ ಅವರ ಭೇಟಿಗೆ ಅವಕಾಶ ದೊರಕಿರಲಿಲ್ಲ, ಜ.17 ಹಾಗೂ 18ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಸಂಪುಟ ವಿಸ್ತರಣೆಯ ಬಗ್ಗೆ ಮಾತನಾಡಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾತರದಲ್ಲಿದ್ದಾರೆ. ಈಗಾಗಲೇ ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್ ಸೇರಿದಂತೆ ಹಲವು ನೂತನ ಶಾಸಕರು ಮಾಧ್ಯಮದ ಮುಂದೆ ಈ ಬಗ್ಗೆ ಪರೋಕ್ಷವಾಗಿ ಅಸಮಾನ ತೋಡಿಕೊಂಡಿದ್ದಾರೆ. ಈ ಬಗ್ಗೆ ಯಾವುದೇ ಭಿನ್ನಭಿಪ್ರಾಯ ಮೂಡುವುದರ ಮೊದಲೇ ಸಂಪುಟ ವಿಸ್ತರಣೆ ಮಾಡುವುದು ಉತ್ತಮ, ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ಗೆ ತಿಳಿಸುವುದಾಗಿ ಬಿಎಸ್ವೈ ಹೇಳಿದ್ದಾರೆ.