ಮೈಸೂರು, ಜ.12 (Daijiworld News/PY) : "ಅಸಹಕಾರ ಚಳುವಳಿಯನ್ನು ಆರಂಭಿಸುವ ಅಗತ್ಯವಿದೆ. ಕಳೆದ 64 ವರ್ಷಗಳಿಂದ ಈ ಭೂಮಿಯಲ್ಲಿ ಜನಿಸಿದ್ದೇನೆ. ನನ್ನ ಪೌರತ್ವದ ಬಗ್ಗೆ ಪ್ರಶ್ನಿಸುವ ಹಕ್ಕು ಅವರಿಗಿಲ್ಲ" ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್ ಮಹೇಶ್ ಹೇಳಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಬಿಎಸ್'ಪಿ ಬೆಂಬಲಿತ ವಿದ್ಯಾರ್ಥಿಗಳು ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ. ನನ್ನ ಪೌರತ್ವದದ ಬಗ್ಗೆ ಪ್ರಶ್ನಿಸುವ ಹಕ್ಕು ಅವರಿಗಿಲ್ಲ, ನಾನು ಕಳೆದ 64 ವರ್ಷಗಳಿಂದ ಈ ಭೂಮಿಯಲ್ಲಿ ಜನಿಸಿದ್ದೇನೆ" ಎಂದು ಹೇಳಿದರು.
"ಕೆಲವು ಅಕ್ರಮ ವಲಸಿಗರನ್ನು ಗುರುತಿಸುವ ಸಲುವಾಗಿ ಕೋಟ್ಯಾಂತರ ಜನರಿಗೆ ಸಮಸ್ಯೆ ಮಾಡುವುದು ಸರಿಯಲ್ಲ, ಫ್ರೀ ಕಾಶ್ಮೀರ ನಾಮಫಲಕ ಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರವೇ ಕ್ರಮ ಕೈಗೊಂಡಿದ್ದಾರೆ. ಆದರೆ, ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣ ವಿಚಾರವಾಗಿ ಇನ್ನೂ ಪ್ರಗತಿ ಕಂಡಿಲ್ಲ" ಎಂದು ತಿಳಿಸಿದರು.