ಕಾರವಾರ, ಜ.12 (Daijiworld News/PY) : "ನಮ್ಮ ಕಾಲದಲ್ಲಿ ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಂಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಕಾಲದಲ್ಲಿ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ನಿಮಗೆಲ್ಲರಿಗೂ ತಿಳಿದಿದೆ. ಆದ ಕಾರಣ ಕುಮಾರಸ್ವಾಮಿ ಅವರು ದಾರಿ ತಪ್ಪಿಸುವ ಕೆಲಸ ಮಾಡಬಾರದು" ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಜ.12 ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಟಿಎಂಎಸ್ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಪೊಲೀಸರು ನಮ್ಮ ಕಾಲದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಆದ ಕಾರಣ ಕುಮಾರಸ್ವಾಮಿ ಅವರು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುಮಾರಸ್ವಾಮಿ ಅವರು ತಮ್ಮ ಕಾಲದಲ್ಲಿ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ನಿಮಗೆಲ್ಲರಿಗೂ ತಿಳಿದಿದೆ" ಎಂದು ಹೇಳಿದರು.
"ಈಗಾಗಲೇ ಉಗ್ರವಾದಿಗಳ ನೆಲೆಗಳ ಮೇಲೆ ಹಾಗೂ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ. ಉಗ್ರರ ಯಾವುದೇ ಚಟುವಟಿಕೆಗಳಿಗೆ ಕರ್ನಾಟಕದಲ್ಲಿ ಅವಕಾಶ ಕೊಡುವುದಿಲ್ಲ. ತಮಿಳುನಾಡಿನಿಂದ ಉಗ್ರರ ಕುರಿತು ಮಾಹಿತಿ ಬಂದ ಕೂಡಲೇ ಮೂವರನ್ನು ಸೆರೆಹಿಡಿಯಲಾಗಿದೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದಾರೆ. ಅವರೆಲ್ಲರೂ ಸೇರಿದಂತೆ ಅವರ ಎಲ್ಲಾ ಜಾಲಗಳನ್ನು ಬೇಧಿಸುವ ಕಾರ್ಯ ನಡೆಯುತ್ತಿದೆ" ಎಂದರು.
"ಉಗ್ರರು ಒಂದೇ ಕಡೆ ನಿಲ್ಲದೇ ಜಾಗವನ್ನು ಬದಲಾಯಿಸುತ್ತಿರುತ್ತಾರೆ. ಉಗ್ರನ್ನು ಸದೆಬಡೆಲು ಶೋಧನಾ ಕಾರ್ಯ ಮಾಡಲಾಗುತ್ತಿದ್ದು, ಭಯೋತ್ಪಾದನೆ ಮಾಡುವ ಎಲ್ಲ ಶಕ್ತಿಗಳನ್ನು ನಿಯಂತ್ರಿಸುವ ಕಾರ್ಯವನ್ನು ನಮ್ಮ ಪೊಲೀಸರು ಮಾಡುತ್ತಿದ್ದಾರೆ' ಎಂದು ಹೇಳಿದರು.