ನವದೆಹಲಿ, ಜ.12 (Daijiworld News/PY) : ಉತ್ತರಪ್ರದೇಶದ ಮಾವೋ ಜಿಲ್ಲೆಯ ಮುಹಮ್ಮದಾಬಾದ್ನಲ್ಲಿ ಸಮಾಜವಾದಿ ಪಕ್ಷದ ಮುಖಂಡ ಬಿಜ್ಲಿ ಯಾದವ್ (40) ಅವರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಬಿಜ್ಲಿ ಯಾದವ್ ಅವರು ಸಖ್ವಾಲಿಯಾ ಗ್ರಾಮದ ಮಾಜಿ ಗ್ರಾಮ ಮುಖ್ಯಸ್ಥರಾಗಿದ್ದರು.
ಭಾನುವಾರ ಬೆಳಗ್ಗೆ ಹೊಲಕ್ಕೆ ಹೋಗುವ ಸಂದರ್ಭ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದು, ಯಾದವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಹತ್ಯೆನಡೆಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ಧಾರೆ.