ಚಾಮರಾಜನಗರ, ಜ.12 (Daijiworld News/PY) : ಕೇರಳ ಮೂಲದ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿಯ ಆಧಾರದ ಚಾಮರಾಜನಗರ ಜಿಲ್ಲಾ ಪೊಲೀಸರು, ಭಯೋತ್ಪಾದಕ ನಿಗ್ರಹ ದಳ ಹಾಗೂ ಅಂತರಿಕ ಭದ್ರತಾ ವಿಭಾಗಗಳ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ತಾಲೂಕಿನ ಗುಂಡ್ಲುಪೇಟೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಂಧಿತ ಇಬ್ಬರೂ ಆರೋಪಿಗಳು ಸ್ಥಳೀಯ ನಿವಾಸಿಗಳೆಂದು ಮೂಲಗಳು ತಿಳಿಸಿವೆ.
ಕೇರಳ ಮೂಲದ ಉಗ್ರರೊಂದಿಗೆ ಇವರಿಬ್ಬರು ಸಂಪರ್ಕದಲ್ಲಿದ್ದರು ಎಂಬ ಮಾಹಿತಿಯ ಆಧಾರದ ಮೇಲೆ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತ ಆರೋಪಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದು, ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.