ಬೆಂಗಳೂರು, ಜ 12 (DaijiworldNews/SM): ರಾಜ್ಯಸಭೆ ಚುನಾವಣೆ ಕುರಿತು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ರಾಜ್ಯ ಸಭೆಗೆ ದೇವೇಗೌಡ ಸದಸ್ಯರಾಗುತ್ತಾರೆ ಎನ್ನುವ ವದಂತಿಗೆ ಇದೀಗ ದೊಡ್ಡ ಗೌಡರು ತೆರೆ ಎಳೆದಿದ್ದಾರೆ.
"ಯಾವುದೇ ಕಾರಣಕ್ಕೂ ನಾನು ರಾಜ್ಯಸಭೆ ಸದಸ್ಯನಾಗುವುದಿಲ್ಲ ಎನ್ನುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಹಾಕಿದ್ದಾರೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಎಚ್. ಡಿ. ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಗಾಳಿ ಸುದ್ದಿಯೊಂದಕ್ಕೆ ಬ್ರೇಕ್ ಬಿದ್ದಂತಾಗಿದೆ.
"ರಾಜ್ಯಸಭೆ ಸದಸ್ಯರಾಗುವ ಬಗ್ಗೆ ಸುದ್ದಿಗಳು ಹಬ್ಬುತ್ತಿವೆ. ಅದರ ಮೇಲೆ ಮಾಧ್ಯಮಗಳು ವಿಶ್ಲೇಷಣೆ ಮಾಡುತ್ತಿವೆ. ಮತ್ತೊಂದೆಡೆ ನನ್ನ ಬಗ್ಗೆ ಟೀಕೆಗಳನ್ನು ಮಾಡಲಾಗುತ್ತಿದೆ. ನನಗೆ ಅಧಿಕಾರದ ದಾಹ ಇದೆ ಎನ್ನಲಾಗುತ್ತಿದೆ. ನನ್ನ ಜೀವನದಲ್ಲಿ ಅದರಲ್ಲೂ ರಾಜಕೀಯ ಜೀವನದಲ್ಲಿ ಯಾವತ್ತೂ ಕೂಡ ನಾನು ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ರಾಜ್ಯ ಸಭೆ ಪ್ರವೇಶ ಮಾಡಲ್ಲ. ಎಲ್ಲಿದ್ದರೂ ಕೂಡ ರೈತಪರವಾಗಿ ದೇವೇಗೌಡ ಇರಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.