ಬೆಂಗಳೂರು, ಜ 12 (DaijiworldNews/SM): ದೇಶದಲ್ಲಿ ಜನ ಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಕೇಂದ್ರ ಸರ್ಕಾರಕ್ಕೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದು ಮುಖ್ಯವಾಗಿರುವುದು ವಿಪರ್ಯಾಸ ಎಂದು ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜನರ ಜೀವನ ಗುಣಮಟ್ಟ ಸುಧಾರಿಸುವ, ಜಿಡಿಪಿ-ಉದ್ಯೋಗ ಹೆಚ್ಚಳ, ಸಾರ್ವಜನಿಕ ವಲಯವನ್ನು ಅಭಿವೃದ್ಧಿಪಡಿಸುವುದು ಮುಂತಾದವುಗಳ ಬಗ್ಗೆ ಗಮನಹರಿಸುವುದು ಸರ್ಕಾರದ ಆದ್ಯತೆ ಆಗಬೇಕಿತ್ತು. ಆದರೆ ಕೇಂದ್ರ ಸರಕಾರ ಇವುಗಳನ್ನು ಬದಿಗಿಟ್ಟು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಅವುಗಳ ಅಗತ್ಯತೆ ಏನಿತ್ತು ಎಂದು ರಮೇಶ್ ಕುಮಾರ್ ಪ್ರಶಿಸಿದ್ದಾರೆ.