ಹೊಸದಿಲ್ಲಿ, ಜ.13 (Daijiworld News/PY) : ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರದ ಹಿನ್ನೆಲೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ನ 9 ಸದಸ್ಯರ ಪೀಠದ ಮುಂದೆ ಬರಲಿದೆ.
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ್ದ ಸುಪ್ರೀಂ ಕೋರ್ಟ್ನ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಸುಮಾರು 60 ಅರ್ಜಿಗಳು ಸಲ್ಲಿಕೆಯಾಗಿವೆ. 2019ರ ನ.14ರಂದು ಆಗಿನ ಆಗಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠವು ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಇದನ್ನು ಒಂಬತ್ತು ಸದಸ್ಯರ ಪೀಠಕ್ಕೆ ವರ್ಗಾಯಿಸಿತ್ತು.
ಈ ಹಿಂದೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸದ್ಯಕ್ಕೆ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ನೇತೃತ್ವದ 9 ಮಂದಿ ಸದಸ್ಯರ ಪೀಠ ಮರುಪರಶೀಲನೆ ನಡೆಸಲಿದೆ.
ನ್ಯಾ. ಆರ್ ಭಾನುಮತಿ, ನ್ಯಾ. ಅಶೋಕ್ ಭೂಷಣ್, ನ್ಯಾ. ನಾಗೇಶ್ವರ್ ರಾವ್, ನ್ಯಾ. ಎಂ.ಎಂ. ಶಾಂತಗೌಡರ್, ನ್ಯಾ. ಎಸ್.ಎ ನಜೀರ್, ನ್ಯಾ. ಆರ್. ಸುಭಾಶ್ ರೆಡ್ಡಿ, ನ್ಯಾ. ಬಿ.ಆರ್. ಗವೈ ಮತ್ತು ನ್ಯಾ. ಸೂರ್ಯ ಕಾಂತ್ ಅವರನ್ನು ಒಳಗೊಂಡ ಪೀಠ ಈ ಅರ್ಜಿ ವಿಚಾರಣೆಯನ್ನು ನಡೆಸಲಾಗಿದೆ.