ಬಳ್ಳಾರಿ, ಜ 13 (Daijiworld News/MSP): ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲೆಂದು ಬಂದಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಪರ ರ್ಯಾಲಿಯಲ್ಲಿ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಇದನ್ನು ವಿರೋಧಿಸಿ , ಹಾಗೂ ಸೋಮಶೇಖರ್ ರೆಡ್ಡಿ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಜಮೀರ್ ಸೋಮವಾರ ರೆಡ್ಜಿ ಮನೆ ಮುಂದೆ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದರು. ಇದೇ ವೇಳೆ ಬಂದ ಪೊಲೀಸರು ಜಮೀರ್ ಬಳ್ಳಾರಿಯ ಹೊರವಲಯದ ಬೈಪಾಸ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ನಡೆಸಲು ಜಮೀರ್ ಅಹ್ಮದ್ ಅವರಿಗೆ ಅನುಮತಿ ನೀಡಿರಲಿಲ್ಲ. ಧರಣಿಗೂ ಮಾಡುವ ಮುನ್ನ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಸ್ಥಳಕ್ಕೆ ಆಗಮಿಸಿ ಜಮೀರ್ ಅಹ್ಮದ್ ಅವರನ್ನು ಬಂಧಿಸಿ ಎಂದು ಎಸ್. ಪಿ.ಸಿ.ಕೆ ಬಾಬಾ ಅವರು ಹೇಳಿದ್ದಾರೆ.